ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ನೀಡಲಾದ ಲಂಚವನ್ನು ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬರ್ಲುಸ್ಕೋನಿ “ಇದೊಂದು ಉದ್ಯಮದ ಭಾಗ,” ಎಂದು ಬಣ್ಣಿಸುವುದರ ಮೂಲಕ ಜಾಗತೀಕರಣದ ವಾಹಕಗಳಾದ ಬಹುರಾಷ್ಟ್ರೀಯ ಕಂಪನಿಗಳ ಕರಾಳ ಮುಖವನ್ನು ಅನಾವರಣಗೊಳಿಸಿ, ಭ್ರಷ್ಟಾಚಾರಕ್ಕೆ ಹೊಸವಾಖ್ಯಾನ ನೀಡಿದ್ದಾರೆ.
ಚಿಲ್ಲರೆ ಮಾರುಕಟ್ಟೆಯ ದೈತ್ಯ ಕಂಪನಿಯಾದ ವಾಲ್ಮಾರ್ಟ್ ಈ ಭ್ರಷ್ಟಾಚಾರವನ್ನು “ಲಾಬಿ” ಎಂದು ಹೆಸರಿಸಿದೆ. ಅಮೇರಿಕಾ ಮೂಲದ ಈ ಬಹುರಾಷ್ಟ್ರೀಯ ಕಂಪನಿ ಅಲ್ಲಿನ ಸಂಸತ್ತಿಗೆ ಸಲ್ಲಿಸಿರುವ ವಿವರಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಒಳಗೊಂಡಂತೆ ಹಲವು ರಾಷ್ಟ್ರಗಳಲ್ಲಿ ಲಂಚಕ್ಕಾಗಿ 25 ದಶಲಕ್ಷ ಡಾಲರ್ ಹಣ ವಿನಿಯೋಗಿಸಿರುವುದಾಗಿ ಹೇಳಿಕೊಂಡಿದೆ. ಭಾರತದಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮೋಜು ಮಸ್ತಿಗಾಗಿ ವರ್ಷವೊಂದಕ್ಕೆ 11,500 ಡಾಲರ್ ಖರ್ಚುಮಾಡಲಾಗಿದೆ ಎಂದು ಕಂಪನಿ ತನ್ನ ವಾರ್ಷಿಕ ವರದಿಯಲ್ಲಿ ಬಹಿರಂಗವಾಗಿ ಒಪ್ಪಿಕೊಂಡಿದೆ.....
ದೆಹಲಿ ಮೂಲದ ನೀರಾ ರಾಡಿಯ ಎಂಬ ಅಸಾಮಾನ್ಯರಿಗಷ್ಟೇ ಗೊತ್ತಿದ್ದ ಮಹಿಳೆ ಅಕ್ರಮ ವ್ಯವಹಾರಗಳಿಗೆ ದಲ್ಲಾಳಿಯಾಗಿದ್ದು, ತನ್ನ ವೃತ್ತಿಯನ್ನು ಲಾಬಿ ಎಂದು ಕರೆದುಕೊಂಡಿದ್ದಾಳೆ. ದೆಹಲಿಯ ಪ್ರತಿಷ್ಟಿತರಲ್ಲಿ ಮುಖ್ಯಳಾಗಿರುವ ಈಕೆ ಈಗ ಸಾವಿರಾರು ಕೋಟಿ ರೂಪಾಯಿಗಳ ಒಡತಿ. ದೆಹಲಿ ಹೊರವಲಯದ ತೋಟದ ಮನೆಯಲ್ಲಿ ರಾಜಕಾರಣಿಗಳು, ಕಂಪನಿಯ ಅಧಿಕಾರಿಗಳಿಗೆ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಪ್ರತಿ ನಿತ್ಯ ಪಾರ್ಟಿ ಏರ್ಪಡಿಸುವ ಇವಳನ್ನು ನಮ್ಮ ಪರಮ ಪೂಜ್ಯ ಶ್ರಿ.ಶ್ರೀ.ಶ್ರೀ. (ಇನ್ನೊಂದಷ್ಟು ಶ್ರೀಗಳನ್ನು ಸೇರಿಸಿಕೊಳ್ಳಿ) ಪೇಜಾವರ ಸ್ವಾಮಿಗಳು ತನ್ನ ಪರಮಶಿಷ್ಯೆ ಎಂದು ಘೊಷಿಸಿಕೊಂಡಿದ್ದಾರೆ. ಇವಳು ಸಂಪಾದಿಸಿದ ಪಾಪದ ಹಣವನ್ನು ಯಾವ ಆತ್ಮ ಸಾಕ್ಷಿಯೂ ಇಲ್ಲದೆ ದೇಣಿಗೆಯಾಗಿ ಸ್ವೀಕರಿಸಿದ್ದಾರೆ. ನಮ್ಮ ಯಡಿಯೂರಪ್ಪ ತಾನು ತಿಂದ ಎಂಜಲನ್ನು ನಮ್ಮ ಮಠಾಧೀಶರ ಬಾಯಿಗೆ ಒರೆಸಲಿಲ್ಲವೆ?ಅದೇ ರೀತಿ ನೀರಾ ರಾಡಿಯ ಕೂಡ ತಾನು ಬೆಳೆಯುತ್ತಿರುವ ಪಾಪದ ಫಸಲನ್ನು ಮಠಗಳಿಗೂ ಹಂಚುತ್ತಿದ್ದಾಳೆ. ದುರಂತದ ಸಂಗತಿಯೆಂದರೆ, ವರ್ತಮಾನದ ಸಮಾಜಕ್ಕೆ ಆವರಿಸಿಕೊಳ್ಳತ್ತಿರುವ ವೈಚಾರಿಕತೆಯ ಶೂನ್ಯತೆಯಿಂದಾಗಿ ಹೊಸ ರೂಪ ಪಡೆಯುತ್ತಿರುವ ಸಾಮಾಜಿಕ ಅನಿಷ್ಟಗಳಿಗೆ ನಾವೀಗ ಸಾಕ್ಷಿಯಾಗಬೇಕಾಗಿದೆ.